
ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.
ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ…
ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು ಕೃಷಿ…
Micronutrients are present in plants in amounts ranging from thousandths to hundred-thousandths of a percent and perform an essential function in vital processes. The theoretical aspects of micronutrient application in agriculture became better known after the physiological role of micronutrients in the life of plants had been partially revealed. A major contribution to elucidating the…
ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…
ಮಣ್ಣಿನ ಸಮಸ್ಥಿತಿಯನ್ನು ವೈಜ್ಞಾನಿಕ ಭಾಷೆಯಲ್ಲಿ pH (Potentila hydrogen) ಎಂಬುದಾಗಿ ಕರೆಯುತ್ತಾರೆ. ಇದನ್ನು ಕನ್ನಡದಲ್ಲಿ ರಸ ಸಾರ ಎಂಬುದಾಗಿ ಕರೆಯುತ್ತಾರೆ. ಹುಳಿ ಹೆಚ್ಚಾದರೆ ಅದು ಆಮ್ಲ, ಸುಡುವಿಕೆ ಆದರೆ ಅದು ಕ್ಷಾರ. ಇವೆರಡೂ ಆಗದಿದ್ದರೆ ಅದು ಸಮಸ್ಥಿತಿ. ಇದನ್ನು ಸಹನಾ ಸ್ಥಿತಿ ಎಂಬುದಾಗಿ ಹೇಳಬಹುದು.ಇದು ಮಣ್ಣಿಗೆ ಮಾತ್ರವಲ್ಲ. ಪ್ರತೀಯೊಂದು ಜೀವಿಗೂ ಇರುವಂತದ್ದು. ಮನುಷ್ಯನ ಶರೀರದಲ್ಲಿ ಜೊಲ್ಲು, ರಕ್ತ ಇವುಗಳಲ್ಲೂ ಆಮ್ಲ, ಕ್ಷಾರ, ಮತ್ತು ತಟಸ್ಥ ಎಂಬುದಿದೆ. ಮಣ್ಣು ಎಂಬುದು ಸಮಸ್ಥಿತಿಯಲ್ಲಿದ್ದರೆ ( nutral) ಅಲ್ಲಿ ಬೆಳೆಯುವ ಬೆಳೆಗೆ…
ಅಡಿಕೆ ಮಾರುಕಟ್ಟೆ ವರ್ಷದುದ್ದಕ್ಕೂ ಏಕಪ್ರಕಾರವಾಗಿ ಇರುವುದಿಲ್ಲ. ಒಮ್ಮೆ ಗ್ರಹಣ ಹಿಡಿದು ಬೆಲೆ ಕುಸಿಯುತ್ತದೆ. ಮತ್ತೆ ಗ್ರಹಣ ಮೋಕ್ಷ ಕಾಲ ಬಂದೇ ಬರುತ್ತದೆ. ಅಡಿಕೆ ಮಾರಾಟವಾಗಿ ಹಣ ಕೈಗೆ ಬರುವ ತನಕ ಗ್ರಹಣ ಕಾಲವೂ, ಹಣ ಬರಲಾರಂಭಿಸಿದ ತರುವಾಯ ಅದು ಮುಗಿಯುವ ತನಕ ಗ್ರಹಣ ಮೋಕ್ಷವೂ ನಡೆಯುತ್ತಾ ಇರುತ್ತದೆ. ಇವುಗಳ ಮಧ್ಯೆ ರೈತರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕಾಗುತ್ತದೆ. ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಕೆಂಪಡಿಕೆ ಧಾರಣೆ ಸ್ವಲ್ಪ ಚೇತರಿಗೆ ಪ್ರಾರಂಭವಾಗಿದೆ. ಚಾಲಿಗೆ ಸ್ವಲ್ಪ ನೆರಳು ಕವಿದಿದೆ. ಅನಿರ್ಧಿಷ್ಟಾವಧಿಯ ತನಕ…
ಅಡಿಕೆ ಬೆಳೆಗಾರರಲ್ಲಿ ಸಿಗುವ ತ್ಯಾಜ್ಯಗಳಾದ ಸುಲಿದ ಅಡಿಕೆ ಸಿಪ್ಪೆ, ಅದರ ಗರಿ, ಹಾಳೆ ಎಲ್ಲವನ್ನೂ ಒಟ್ಟು ಸೇರಿದರೆ ಅದರ ಪ್ರಮಾಣ, ಆ ಅಡಿಕೆ ತೋಟಕ್ಕೆ ಬೇಕಾಗುವ ಎಲ್ಲಾ ಸಾವಯವ ಅಂಶವನ್ನು ಪೂರೈಸುವಷ್ಟು. ಆದರೆ ನಮ್ಮಲ್ಲಿ ಅವುಗಳ ಸದುಪಯೋಗ ಆಗುತ್ತಿಲ್ಲ. ಹೆಚ್ಚಿನ ರೈತರು ಅಡಿಕೆ ತೋಟದಲ್ಲಿ ಸಿಗುವ ತ್ಯಾಜ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡದೆ ನಷ್ಟ ಮಾಡಿಕೊಳ್ಳುತ್ತಾರೆ. ಇದನ್ನು ಸ್ವಲ್ಪವೂ ನಷ್ಟವಾಗದಂತೆ ಬಳಸಿ ರಕ್ಷಿಸಿದರೆ ಮಣ್ಣು ಫಲವತ್ತಾಗುತ್ತದೆ.ಬೆಳೆ ನಳನಳಿಸುತ್ತದೆ. ನೀವೆಂದಾದರೂ ಉತ್ತರ ಕರ್ನಾಟಕ, ಮಲೆನಾಡಿನ ಕಡೆ ಹೋಗಿದ್ದರೆ ಒಮ್ಮೆ ಅಲ್ಲಿನ…
2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ. ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…
ಕೆಸು Colocasia or Taro ಎಂಬುದು ಎಲ್ಲಾ ಪ್ರದೇಶಗಳಲ್ಲೂ ಕಂಡು ಬರುವ ಒಂದು ಕಳೆ ಸಸ್ಯ. ಇದರಲ್ಲಿ ನೂರಾರು ವಿಧಗಳಿದ್ದು, ಕೆಲವೇ ಕೆಲವು ಅಡುಗೆ ಉದ್ದೇಶಕ್ಕೆ ಬಳಕೆಮಾಡಲು ಸಲ್ಲುವಂತದ್ದು. ಹೆಚ್ಚಿನವು ಕಳೆ ಸಸ್ಯಗಳಂತೆ ಒಮ್ಮೆ ಹೊಲದಲ್ಲಿ ಹುಟ್ಟಿದರೆ ಅದನ್ನು ನಿರ್ನಾಮ ಮಾಡಲು ಸಾಧ್ಯವೇ ಆಗುವುದಿಲ್ಲ. ಇದನ್ನು ನಿರ್ನಾಮ ಮಾಡುವುದು ಎಂದರೆ ಅದು ಭಗೀರಥ ಪ್ರಯತ್ನ ಎಂದೇ ಹೇಳಬಹುದು. ಇದು ಕಳೆಯಾಗಿ ಕಂಡರೂ ಅದು ಬೆಳೆಯುವುದು ಮಾತ್ರ ಫಲವತ್ತಾದ ಮಣ್ಣಿನಲ್ಲಿ ಎಂಬುದು ಇಲ್ಲಿ ಉಲ್ಲೇಖನೀಯ. ಒಳ್ಳೆಯವರಿಗೆ ಕಾಲವಿಲ್ಲ ಎಂಬ…
ಕಳೆದ ವರ್ಷ ಈ ಸಮಯದಲ್ಲಿ ಹಸಿ ಅಡಿಕೆಗೆ 7500 ರೂ. ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಈ ವರ್ಷ ಪ್ರಾರಂಭಿಕ ದರ 6500, ಇನ್ನೂ ಇಳಿಕೆಯಾಗಿ 6300 ಕ್ಕೆ ಬಂದಿದೆ. ಇನ್ನೂ ಇಳಿಯುವ ಸಂಭವ. ಇದು ಮುಂದಿನ ಅಡಿಕೆ ಧಾರಣೆಯ ಅಸ್ಥಿರತೆಯನ್ನು ತೋರಿಸುತ್ತಿದೆ. ಕೆಂಪಡಿಕೆಯ ಉತ್ಪಾದನೆ ಭಾರೀ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಪ್ರದೇಶಗಳ ಇಳುವರಿಯನ್ನು ಹೊಸ ಪ್ರದೇಶಗಳು ಹಿಂದಿಕ್ಕುತ್ತಿದೆ. ಜೋಳ, ರಾಗಿ, ಭತ್ತ ತರಕಾರಿ ಬೆಳೆಯುತ್ತಿದ್ದ ಬಯಲು ಸೀಮೆ ಪ್ರದೇಶಗಳಲ್ಲಿ ಉತ್ತಮ ಇಳುವರಿ ಕಾಣಿಸುತ್ತಿದ್ದು, ಮಾರುಕಟ್ಟೆ ಈ ಉತ್ಪಾದನೆಯನ್ನು ತಾಳಿಕೊಳ್ಳಬಹುದೇ…
ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್ ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್ ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…