
ತೆಂಗಿನ ತೋಟದಲ್ಲಿ ಗರಿಷ್ಟ ಆದಾಯ ಕೊಡಬಲ್ಲ ಮಿಶ್ರ ಬೆಳೆ.
ಮಿಶ್ರ ಬೆಳೆ ಬೆಳೆಸಲು ಅತೀ ಸೂಕ್ತ ವಾದ ತೋಟ ಎಂದರೆ ತೆಂಗಿನ ತೋಟ. ಇದರ ಮಧ್ಯಂತರದಲ್ಲಿರುವ ಸ್ಥಳಾವಕಾಶ ಬೇರೆ ಯಾವ ಬೆಳೆಯಲ್ಲೂ ಸಿಗದು. ಆದ ಕಾರಣ ತೆಂಗನ್ನು ಏಕ ಬೆಳೆಯಾಗಿ ಉಳಿಸಿಕೊಳ್ಳದೆ ಸಾಧ್ಯವಾದಷ್ಟು ಮಿಶ್ರ ಬೆಳೆಗಳನ್ನು ಬೆಳೆಸಿರಿ. ಒಂದು ತೆಂಗಿನ ತೋಟದಲ್ಲಿ ಮರವೊಂದರಲ್ಲಿ 100 ಕಾಯಿ ಸಿಕ್ಕರೂ ಸಹ ಒಂದು ಎಕ್ರೆಯಲ್ಲಿ ಸುಮಾರು 8000 ಕಾಯಿಗಳು. ಇದರ ಮಾರಾಟದಿಂದ ಸಿಗಬಹುದಾದ ಸರಾಸರಿ ಉತ್ಪತ್ತಿ, ಸುಮಾರು 80,000 ರೂ. ಗಳು. ಒಂದು ಎಕ್ರೆಗೆ ಇಷ್ಟು ಉತ್ಪತ್ತಿ ಸಾಕೇ? ಖಂಡಿತವಾಗಿಯೂ …