
ತೆಂಗಿನ ಇಳುವರಿ ಹೆಚ್ಚಲು ಹಿಪ್ಪು ನೇರಳೆ ಬೆಳೆ ಸಹಾಯಕ.
ತೆಂಗಿನ ತೋಟದಲ್ಲಿ ಮಿಶ್ರ ಬೆಳೆಗಳನ್ನು ಬೆಳೆಸಿದರೆ ತೆಂಗಿನಲ್ಲಿ ಇಳುವರಿ ಹೆಚ್ಚುತ್ತದೆ. ತೆಂಗಿನ ತೋಟದಲ್ಲಿ ಬಹುವಾರ್ಷಿಕ ಮಿಶ್ರ ಬೆಳೆಗಳಲ್ಲಿ ಹಿಪ್ಪು ನೇರಳೆ ಒಂದು. ಉಳಿದೆಲ್ಲಾ ಮಿಶ್ರ ಬೆಳೆಗಳು ಕೊಡುವ ಆದಾಯಕ್ಕೆ ಹೋಲಿಕೆ ಮಾಡಿದರೆ ಹಿಪ್ಪು ನೇರಳೆಯೇ ಶ್ರೇಷ್ಟ. ಇದು ನೆಟ್ಟು ಸಸಿ ಆಗುವ ತನಕ ಒಂದು ವರ್ಷ ಕಾಯಬೇಕಾಗಬಹುದು. ನಂತರ ಇದರಿಂದ ನಿರಂತರ ಆದಾಯ ಬರುತ್ತಲೇ ಇರುತ್ತದೆ. ತೆಂಗಿನ ಅಧಿಕ ಇಳುವರಿಗೂ ಇದು ಸಹಾಯಕವಾಗುತ್ತದೆ. ರೇಶ್ಮೆ ವ್ಯವಸಾಯ ಎಂಬುದು ಒಂದು ರೀತಿಯಲ್ಲಿ ಸರಕಾರಿ ನೌಕರಿ ಇದ್ದಂತೆ. ತಿಂಗಳಾಂತ್ಯಕ್ಕೆ ಬರುವ…