ಅಧಿಕ ಇಳುವರಿಗೆ ಸಹಾಯಕವಾಗುವ ಸಾವಯವ ಗೊಬ್ಬರಗಳು.
ರಾಸಾಯನಿಕ ಗೊಬ್ಬರಗಳು ಒಮ್ಮೆಗೆ ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ ಕಷ್ಟ. ಮಣ್ಣಿನ ಫಲವತ್ತತೆಯಿಂದ ಮಾತ್ರ ಧೀರ್ಘಕಾಲಿಕ ಫಲಿತಾಂಶ ಪಡೆಯಲು ಸಾಧ್ಯ. ಧೀರ್ಘಾವಧಿ ಬೆಳೆಗಳಿಗೆ ಮಣ್ಣಿನ ಫಲವತ್ತತೆ ಪ್ರಾಮುಖ್ಯ. ಸಾವಯವ ಅಥವಾ ನೈಸರ್ಗಿಕ ಮೂಲವಸ್ತುಗಳಿಂದ ಮಾತ್ರ ಮಣ್ಣಿನ ಫಲವತ್ತತೆ ವೃದ್ದಿಯಾಗಲು ಸಾಧ್ಯ. ರಾಸಾಯನಿಕ ಗೊಬ್ಬರಗಳು ಎಲ್ಲವೂ ಆಮ್ಲೀಯ ಗುಣದವು. ಇದನ್ನು ಮಣ್ಣಿಗೆ ಹಾಕುವುದರಿಂದ ಮಣ್ಣು ಸ್ವಲ್ಪ ಮಟ್ಟಿಗೆ ಅಜೀರ್ಣಕ್ಕೊಳಗಾಗುತ್ತದೆ. ರಾಸಾಯನಿಕ ಗೊಬ್ಬರಗಳನ್ನು ಬಳಸುವುದರ ಜೊತೆಗೆ ಸಾವಯವ ವಸ್ತುಗಳನ್ನೂ ಸೇರಿಸುತ್ತಿದ್ದರೆ ಮಣ್ಣು ಆರೋಗ್ಯವಾಗಿರುತ್ತದೆ. ಮಣ್ಣು…