ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.
ಜುಲೈ ತಿಂಗಳ ಪ್ರಾರಂಭದಲ್ಲಿ ಕೆಂಪಡಿಕೆ ಧಾರಣೆ ಏರಿಕೆ ಪ್ರಾರಂಭವಾಗಿ ಬೆಳೆಗಾರರು ಹೆಚ್ಚಿನ ನಿರೀಕ್ಷೆ ಹೊಂದುವಂತಾಯಿತು. ಇನ್ನೂ ಏರಬಹುದು ಸ್ವಲ್ಪ ಕಾಯೋಣ ಎಂದು ಮಾರಾಟಕ್ಕೆ ಹಿಂದೇಟು ಹಾಕುವ ಸ್ಥಿತಿ. ಸಹಜವಾಗಿ ಎಲ್ಲರೂ ಹೀಗೇ ಮಾಡುವುದು. ಆದರೆ ದರ ಏರುತ್ತಾ ಏರುತ್ತಾ ಮುಂದೆ ಹೋಗುವುದಿಲ್ಲ. ಕೆಲ ಸಮಯದ ನಂತರ ಇಳಿಕೆ ಆಗಿಯೇ ಆಗುತ್ತದೆ. ಈಗ ಸ್ವಲ್ಪ ಇಳಿಕೆ ಸಾಧ್ಯತೆ ಕಾಣಿಸುತ್ತಿದೆ. ದರ ಏರಿಕೆಯಾಗುವಾಗ ಮಾಲು ಕೊಡಲು ಯಾವ ರೈತನಿಗೂ ಮನಸ್ಸು ಬರುವುದಿಲ್ಲ. ಕೊನೆಗೆ ಇಳಿಕೆಯಾಗುವಾಗ ಮಾರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದುವೇ…