
ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?
ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು ಸಂಖ್ಯೆಯಲ್ಲಿ ಉದುರಿದರೆ ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…