
ಜೀವವೈವಿಧ್ಯಗಳಿಗೆ ಉರುಳಾಗುತ್ತಿರುವ ರಬ್ಬರ್ ತೋಟದ ಬಳ್ಳಿಗಳು.
ರಬ್ಬರ್ ತೋಟ ಇರುವ ಕಡೆ ಸಂಚರಿಸುವಾಗ ಕಂಡುಬರುವ ಬಳ್ಳಿ ಸಸ್ಯ ಜೀವವೈವಿಧ್ಯಗಳನ್ನು ಸಾಕಷ್ಟು ನಾಶ ಮಾಡಿವೆ, ಇನ್ನೂ ಮಾಡುತ್ತಿವೆ. ರಬ್ಬರ್ ಬೆಳೆಯುವಾಗ ಮೊದಲ ಮೂರು ನಾಲ್ಕು ವರ್ಷ ಮಣ್ಣು ಸವಕಳಿ ತಡೆಗೆ ಅಗತ್ಯವೆಂದು ಬೆಳೆಸಿದ ಈ ಬಳ್ಳಿ ಮರ ಬೆಳೆದ ನಂತರ ತೋಟದಿಂದ ಹೊರಬಂದು ಇಡೀ ಸಸ್ಯವರ್ಗಗಳನ್ನು ಆಪೋಶಣ ತೆಗೆದುಕೊಳ್ಳುತ್ತಿದೆ. ಅದು ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಿ ಅಲ್ಲಿನ ಸಸ್ಯಗಳು, ಮರಗಳ ಮೇಲೆ ಏರಿ ಅದರ ಬೆಳವಣಿಗೆಯನ್ನು ಹತ್ತಿಕ್ಕುವ ಮೂಲಕ ಜೀವವೈವಿಧ್ಯಕ್ಕೆ ಕುತ್ತು ತರುತ್ತದೆ. ಸರಕಾರ,…