
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.
ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ ಒಂದು ಕೊಯಿಲಿನ ಅಡಿಕೆ ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…