
ಅಡಿಕೆ ಮರಕ್ಕೆ ಸುಣ್ಣ ಯಾಕೆ ಕೊಡಲೇ ಬೇಕು? ಇದರಿಂದಾಗಿ ಲಾಭ ಎಷ್ಟು?
ಅಡಿಕೆ ಮರದ ಕಾಡಕ್ಕೆ ನಿರಂತರ ಬಿಸಿಲಿನ ಹೊಡೆತ ಬೀಳುವುದರಿಂದ ಆ ಭಾಗ ಬಿಸಿಯಾಗುತ್ತದೆ. ಮೊದಲಿಗೆ ಬಿಸಿಲು ತಾಗಿದ ಭಾಗ ಹಳದಿ ಮಿಶ್ರ ಕೆಂಪು ಬಣ್ಣದಲ್ಲಿ ಕಾಣಿಸುತ್ತದೆ. ವರ್ಷ ಕಳೆದಾಗ ಅಲ್ಲಿ ಸಣ್ಣ ಒಡಕು ಕಾಣಿಸುತ್ತದೆ. ಎರಡು ಮೂರು ವರ್ಷ ಕಳೆದಾಗ ಆ ಭಾಗ ನಿರ್ಜೀವವಾಗುತ್ತದೆ. ಅದು ಎದ್ದು ಬರಲೂ ಬಹುದು. ಗಾಳಿಗೆ ಬೀಳಲೂ ಬಹುದು. ಇದನ್ನು ತಡೆಯುವ ಉಪಾಯ ಮರದ ಕಾಂಡಕ್ಕೆ ಎಅರಡನೇ ವರ್ಷದಿಂದ ಸಾದ್ಯವಾದಷ್ಟು ವರ್ಷದ ತನಕ ಸುಣ್ಣದ ಲೇಪನ ಒಂದೇ. ಚಳಿಗಾಲ ಪ್ರಾರಂಭವಾಗುವ ಕಾರ್ತಿಕ…