ಫಸಲು ಕೊಡುವ ಅಡಿಕೆ ಮರಗಳಿಗೆ ಗೊಬ್ಬರ – ಯಾವುದು ಹೇಗೆ ಕೊಡಬೇಕು?
ಫಸಲು ಕೊಡುವ ಅಡಿಕೆ ಮರಲ್ಲಿ ವರ್ಷ ಪೂರ್ತಿ ಬೆಳೆವಣಿಗೆ ಇರುತ್ತದೆ. ಮಳೆಗಾಲದಲ್ಲಿ ಬೆಳೆಯುವ ಮಿಡಿಗಳು, ಚಳಿಗಾಲದಲ್ಲಿ ಬಲಿಯುತ್ತಿರುವ ಕಾಯಿಗಳು ಮತ್ತು ಮೂಡುತ್ತಿರುವ ಹೂ ಗೊಂಚಲು ಹಾಗೂ ಬೇಸಿಗೆಯಲ್ಲಿ ಅರಳುತ್ತಿರುವ ಹೂ ಗೊಂಚಲುಗಳು. ಈ ಮೂರೂ ಋತುಮಾನದಲ್ಲೂ ಅಗತ್ಯ ಪೋಷಕಗಳು ಬೇಕು. ಮಳೆಗಾಲ ಪ್ರಾರಂಭದಲ್ಲಿ ಪೋಷಕಗಳ ಕೊಟ್ಟರೆ ಅದು ಗರಿಷ್ಟ ಪ್ರಮಾಣದಲ್ಲಿ ಬಳಕೆಯಾಗುತ್ತದೆ. ಈಗ ಸಾರಜನಕ ಗೊಬ್ಬರವನ್ನು ಕಡಿಮೆ ಪ್ರಮಾಣದಲ್ಲೂ, ರಂಜಕ ಮತ್ತು ಪೊಟ್ಯಾಶ್ ಗೊಬ್ಬರಗಳನ್ನು ನಿಗದಿತ ಪ್ರಮಾಣದಲ್ಲೂ ಕೊಡಬೇಕು. ಕಾರಣ ಮಳೆ ಸಿಡಿಲು ಮಿಂಚುಗಳಿಂದ ಸಾಕಷ್ಟು ಸಾರಜನಕ…