ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more

ಅಡಿಕೆಯ ಮಿಳ್ಳೆ ಉದುರುವುದಕ್ಕೆ ಇದು ಕಾರಣ.

ಬೇಸಿಗೆಯಲ್ಲಿ ಅಡಿಕೆ ಬೆಳೆಗಾರರ ನಿದ್ದೆಗೆಡಿಸುವ ಸಮಸ್ಯೆ ಇದು. ಬೆಳೆಗಾರರು ಇದನ್ನು ಉಳಿಸಲು ಯಾವ ಉಪಚಾರಕ್ಕೂ ಸಿದ್ದರು. ಇದಕ್ಕೆ ಈ ತನಕ ಯಾರೂ ನಿಖರ ಕಾರಣವನ್ನು ನೀಡಿದವರಿಲ್ಲ.  ಆದರೆ ಯಾರೂ ಪರಿಹಾರ ಇಲ್ಲ ಎಂದು ಹೇಳುವವರಿಲ್ಲ. ಇದರ ಬಗ್ಗೆ ಕೆಲವು ಯಾರೂ ಹೇಳದ ವಿಚಾರಗಳು ಇಲ್ಲಿವೆ. ಅಡಿಕೆಯ ಮರದ ಹೂ ಗೊಂಚಲಿನಲ್ಲಿ ಗಂಡು  ಹಾಗೂ ಹೆಣ್ಣು ಹೂವುಗಳು ಇರುತ್ತವೆ. ಗಂಡು ಹೂವು ಉದುರಲಿಕ್ಕೇ ಇರುವುದು. ಹೆಣ್ಣು ಹೂವು ಮಾತ್ರ ಉದುರಬಾರದು. ಆದೆಲ್ಲವೂ ಉಳಿದರೆ ಅಡಿಕೆ ಫಸಲು ಉತ್ತಮವಾಗಿರುತ್ತದೆ. ಆದರೆ…

Read more

ಕೀಟನಾಶಕ ಇಲ್ಲದೆ ಅಡಿಕೆ ಉಳಿಸಬಹುದು.

ಕೀಟನಾಶಕ ಬಳಸದೆ ಅಡಿಕೆ ಉಳಿಸಿಕೊಂಡವರು ಇದ್ದಾರೆ. ಕೆಲವರು ಅಡಿಕೆ ಮಿಡಿ ಉಳಿಸಲು ಪ್ರತೀ ಹೂ ಗೊಂಚಲಿಗೂ ತಿಂಗಳು ತಿಂಗಳು ಕೀಟ ನಾಶಕ ಸಿಂಪಡಿಸುವವರೂ ಇದ್ದಾರೆ. ಸಿಂಪಡಿಸದವರಲ್ಲೂ ಫಸಲು ಇದೆ. ಸಿಂಪಡಿಸಿದಲ್ಲಿಯೂ ಫಸಲು ಇದೆ. ಹೀಗಿರುವಾಗ ಅಡಿಕೆ ಮರದ ಆರೋಗ್ಯ ಹೊಂದಿಕೊಂಡು ಹೂ ಗೊಂಚಲಿನಲ್ಲಿ ಮಿಡಿ ಕಾಯಿ ಉಳಿಯುತ್ತದೆ ಎಂದರೆ ತಪ್ಪಾಗಲಾರದು. ಅಡಿಕೆ ಮರದ ಹೂ ಗೊಂಚಲಿಗೆ ಬರುವ ಕೀಟಗಳಲ್ಲಿ ಈ ತನಕ ಗುರುತಿಸಲಾದದ್ದು, ಸಿಂಗಾರ ತಿನ್ನುವ ಕಂಬಳಿ ಹುಳ. ಬಸವನ ಹುಳ ಪೆಂಟಟೋಮಿಡ್  ಬಗ್. ಇದಲ್ಲದೆ ಬೇರೆ…

Read more
error: Content is protected !!