ಸಿಂಗಾರ ತಿನ್ನುವ ಹುಳ ಮುಟ್ಟಿದ ಹೂ ಗೊಂಚಲು

ಅಡಿಕೆ – ಹೂ ಗೊಂಚಲು ಒಣಗಲು ಯಾವ ಕೀಟ ಕಾರಣ ಮತ್ತು ಪರಿಹಾರ ಏನು?.

ಶುಷ್ಕ ವಾತಾವರಣದ ವ್ಯತ್ಯಾಸವೋ ಏನೋ , ಈಗೀಗ ಅಡಿಕೆ -ಹೂ ಗೊಂಚಲು ಬಹಳ ಪ್ರಮಾಣದಲ್ಲಿ  ಒಣಗಿ ಹಾಳಾಗುತ್ತಿದೆ. ಒಂದು ಕಾಲದಲ್ಲಿ  ಮೈನರ್ ಪೆಸ್ಟ್ ಆಗಿದ್ದ ಈ ಕೀಟ, (ಹುಳ) ಈಗ ಮೇಜರ್ ಪೆಸ್ಟ್ ಆಗುತ್ತಿದೆ. ಇತ್ತೀಚೆಗೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿಯೂ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಅಪಾರ ಬೆಳೆ ನಷ್ಟ ಉಂಟಾಗುತ್ತಿದೆ. ಮಳೆಗಾಲ ಕಳೆದ ತಕ್ಷಣ ಅಡಿಕೆ ಮರದಲ್ಲಿ ಗೊಂಚಲು ಬಿಡಲು ಪ್ರಾರಂಭವಾಗುತ್ತದೆ. ಹೊಸತಾಗಿ ಬರುವ ಬಹುತೇಕ ಹೂ ಗೊಂಚಲುಗಳಲ್ಲಿ ಈ ಹುಳದ  ಬಾಧೆ ಇದೆ. ಮಳೆಗಾಲದಲ್ಲಿ ಸಂಖ್ಯಾಭಿವೃದ್ದಿಯಾದ ಕೀಟ ಅಡಿಕೆಯಲ್ಲಿ…

Read more
snail

ಅಡಿಕೆ ಮರದ ಸಿಂಗಾರ ತಿನ್ನುವ ಸಿಂಬಳದಹುಳು ನಿಯಂತ್ರಣ

ಸಿಂಬಳದ ಹುಳುವಿನ ಉಪಟಳ ಇಬ್ಬನಿ ಬೀಳುವ ಚಳಿಗಾಲದಲ್ಲಿ ಹೆಚ್ಚು. ಈ ಹುಳುಗಳು ನೆಲದಲ್ಲಿ ಇರುತ್ತವೆ. ಅವು ಆಹಾರ ಹುಡುಕುತ್ತಾ ಮರವನ್ನು ಏರಿ ಅಲ್ಲಿ ಎಳೆ ಹೂ ಗೊಂಚಲನ್ನು ತಿನ್ನುತ್ತವೆ. ಬರೇ ಅಡಿಕೆ ಹೂ ಗೊಂಚಲು ಮಾತ್ರವಲ್ಲ ಇವು ಆಹಾರವಾಗಿ ಹಣ್ಣು ತರಕಾರಿಗಳನ್ನೂ ತಿನ್ನುತ್ತವೆ. ಇದನ್ನು ನಿಯಂತ್ರಿಸದೆ ಇದ್ದರೆ  ಒಂದೆರಡು ಸಿಂಗಾರ ಹಾಳಾಗುತ್ತದೆ. ಇಳುವರಿ ನಷ್ಟವಾಗುತ್ತದೆ. ಬಸವನ ಹುಳುಗಳು, ಸಿಂಬಳದ ಹುಳುಗಳು , ಮಳೆಗಾಲದಲ್ಲಿ ನೆಲದಲ್ಲಿ ಅಲ್ಲಲ್ಲಿ ಸಂಚರಿಸುತ್ತಾ ಇರುತ್ತವೆ. ಹಾವಸೆ ಇತ್ಯಾದಿಗಳು ಇದರ ಆಹಾರ. ಅದನ್ನು ತಿನ್ನುತ್ತಾ…

Read more
Mulching to whole ground

ಅಡಿಕೆ – ಕಬ್ಬು ಬೆಳೆಯ ಬೇರು ದುಂಬಿ ನಿಯಂತ್ರಣ.

ಅಡಿಕೆಗೆ ಮಾತ್ರ ಬೇರು ಹುಳದ ಕಾಟ ಅಲ್ಲ. ಕಬ್ಬು, ಹಿಪ್ಪು ನೇರಳೆ ಹೀಗೆ ಬಹಳಷ್ಟು ಬೆಳೆಗಳಿಗೆ ಈ ಹುಳದ ಕಾಟ ಇದೆ. ಇದರ ದುಂಬಿಗಳು ಈಗ ಹೊರಗೆ ಹಾರಾಡುವ ಸಮಯ. ಈಗ ಅದನ್ನು ನಿಯಂತ್ರಿಸುವ ಉಪಾಯ ಇದು.ಮರದ ಆರೋಗ್ಯಕ್ಕೆ  ಮತ್ತು ಬೆಳೆವಣಿಗೆಗೆ  ಆಧಾರವೇ ಅದರ ಬೇರು. ಆ ಬೇರನ್ನು ತಿನ್ನುವ ಒಂದು ಹುಳ ಅದನ್ನು ಏಳಿಗೆಯಾಗಲು ಬಿಡುವುದಿಲ್ಲ. ಕೆಲವು ಮಣ್ಣಿನಲ್ಲಿ ಈ ಬೇರು ಹುಳದ ಸ್ತೊಂದರೆ ಹೆಚ್ಚು. ಮತ್ತೆ ಕೆಲವು ಕಡೆ ಕಡಿಮೆ. ಬೇರು ಹುಳಗಳನ್ನು  ಒಡಿಸದಿದ್ದರೆ…

Read more

ಅಡಿಕೆ ಮರದಲ್ಲಿ ಅಂಟು ಸ್ರವಿಸುವುದಕ್ಕೆ ಕಾರಣ ಮತ್ತು ಪರಿಹಾರ.

ಇತ್ತೀಚಿಗೆ ಮಲೆನಾಡು ಮತ್ತು ಬಯಲುಸೀಮೆಯ ಕೆಲವು ತೋಟಗಳಲ್ಲಿ ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡಿನಿಂದ ಅಂಟು (ಮೇಣದಂತಹ ಪದಾರ್ಥ) ಸೋರುತ್ತಿರುವುದು ಕಂಡುಬಂದಿದೆ.ಇದನ್ನು ಎಂದೂ ಕಂಡಿಲ್ಲದ ಬೆಳೆಗಾರರು ಸಹಜವಾಗಿ ಗೊಂದಲಕ್ಕೀಡಾಗಿದ್ದಾರೆ. ಈ ವಿದ್ಯಮಾನದ ಬಗ್ಗೆ ಲಭ್ಯವಿರುವ ವೈಜ್ಞಾನಿಕ ಮಾಹಿತಿಯನ್ನು ಈ ಲೇಖನದ ಮೂಲಕ ಬೆಳೆಗಾರ ಅನುಕೂಲಕ್ಕಾಗಿ ನೀಡಲಾಗಿದೆ. ಅಂಟು ಸೋರಲು ಕಾರಣವೇನು? ಕೇವಲ ಅರ್ಧ ಸೆಂಟಿಮೀಟರ್‍ ಉದ್ದವಿರುವ ಯೂಪ್ಲಾಟಿಪಸ್ ಪ್ಯಾರಲ್ಲೆಲಸ್ ಎಂಬ ಕೀಟ. ಇದು  ಅಡಿಕೆ ಮರದಕಾಂಡ ಮತ್ತು ಸೋಗೆಯ ದಿಂಡನ್ನು ಕೊರೆದು ಒಳಗೆ ಪ್ರವೇಶಿಸಿಸುತ್ತದೆ. ಕೀಟವು ಪ್ರವೇಶಿಸಿದ…

Read more

ಅಡಿಕೆಯ ಮಿಡಿಗಳು ಯಾಕೆ ಉದುರುತ್ತವೆ?

ಬೇಸಿಗೆಯಲ್ಲಿ ಏನೇನೋ ಕಸರತ್ತು ಮಾಡಿ ಹೂಗೊಂಚಲಿನಲ್ಲಿ ಮಿಡಿಗಳನ್ನು ಉಳಿಸಿರುತ್ತೇವೆ. ಆದರೆ ಅದು ಒಂದೆರಡು ಮಳೆ ಬಂದ ತಕ್ಷಣ ಉದುರಲಾರಂಭಿಸುತ್ತದೆ. ಕೆಲವು ಮುಂಚೆಯೇ ಉದುರುತ್ತದೆ. ಇದಕ್ಕೆ ಹಲವು ಕಾರಣಗಳಿದ್ದು, ರೈತರು ತಮ್ಮಲ್ಲಿ ಯಾವ ಸ್ಥಿತಿ ಇದೆಯೋ ಅದಕ್ಕನುಗುಣವಾಗಿ ಉಪಚಾರ ಮಾಡಿ ಅದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಮಳೆ ಒಂದು ಬಂದರೆ ಸಾಕು, ಅಡಿಕೆ ಮರದಲ್ಲಿ ಮಿಡಿಗಳು ಉದುರುತ್ತವೆ. ಕೆಲವೊಮ್ಮೆ ಒಂದೆರಡು  ಸಂಖ್ಯೆಯಲ್ಲಿ ಉದುರಿದರೆ  ಕೆಲವೊಮ್ಮೆ ಬಹುತೇಕ ಉದುರುತ್ತದೆ. ಅಂತಹಹ ಮಿಡಿಗಳಲ್ಲಿ ಆ ದಿನ ಉದುರಿದ ಮಿಡಿಯನ್ನು ಒಮ್ಮೆ ಸರಿಯಾಗಿ…

Read more
ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ

ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ ಹೇಗೆ ?

ಅಡಿಕೆ ಸಸ್ಯದ ಸುಳಿಯ ಭಾಗದ ಎಲೆಗಳು ಮುರುಟಿ, ತುದಿ ಗಂಟು ಕಟ್ಟಿದಂತೆ ಅಗುವುದಕ್ಕೆ “ಬಂದ್ ರೋಗ” ಎನ್ನುತ್ತಾರೆ. ಇದು ರೋಗವಲ್ಲ ಬೇರು ಜಂತು ಹುಳ ಮುಖ್ಯ ಕಾರಣ. ಇದು ಬೇರನ್ನು ಬೆಳೆಯಲು ಬಿಡದೆ ಸಸ್ಯಕ್ಕೆ ಆಹಾರ ಸರಬರಾಜು ಕಡಿಮೆಯಾಗಿ ಅದರ ಬೆಳೆವಣಿಗೆಯನ್ನು ಹತ್ತಿಕ್ಕುತ್ತದೆ. ಇದನ್ನು ರಾಸಾಯನಿಕವಾಗಿಯೂ, ಜೈವಿಕವಾಗಿಯೂ ಹತೋಟಿ ಮಾಡಬಹುದು. ವರ್ಷದಿಂದ ವರ್ಷಕ್ಕೆ ಅಡಿಕೆ ಬೆಳೆಗಾರರ ತೋಟದಲ್ಲಿ ಮರಗಳ ಸುಳಿ ಭಾಗ ಕುಬ್ಜವಾಗುವುದು ಹೆಚ್ಚಾಗುತ್ತಿದೆ. ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ  ಇದು ಸುಮಾರು 30-40  ವರ್ಷದ ಹಿಂದೆಯೇ ಇತ್ತು….

Read more

ಆಡಿಕೆ ಗರಿ ಹಳದಿಯಾಗಲು ಇದು ಕಾರಣ.

ಸಸ್ಯಗಳಿಗೆ ಉತ್ತಮ ಬಿಸಿಲು ದೊರೆತಾಗ ಅವುಗಳ ಎಲೆಗಳು ಹೆಚ್ಚು ಹೆಚ್ಚು ಉಸಿರಾಟ  ಕ್ರಿಯೆ  ನಡೆಸಿ ಚೆನ್ನಾಗಿ ಬೆಳೆಯುತ್ತವೆ. ಆದರೆ  ಕೆಲವೊಮ್ಮೆ ಈ ಅತಿಯಾದ ತಾಪಮಾನ ಕೆಲವು ಕೀಟಗಳನ್ನು ಆಕರ್ಷಿಸುತ್ತವೆ. ಇಂತದ್ದರಲ್ಲಿ ಒಂದು ಅಡಿಕೆಯ ಗರಿಯಲ್ಲಿ ವಾಸ ಮಾಡುವ ಕೆಂಪು ಮತ್ತು ಬಿಳಿ ತಿಗಣೆ. ಅಡಿಕೆ ಬೆಳೆಗೆ  ಸಹ್ಯ ತಾಪಮಾನ 35 ಡಿಗ್ರಿ  ತನಕ. ಅದಕ್ಕಿಂತ ಹೆಚ್ಚಾದರೆ ಅದು ಸಹಿಸಿಕೊಳ್ಳುವುದಿಲ್ಲ. ಅದಕ್ಕಾಗಿಯೇ  ನಮ್ಮ ಹಿರಿಯರು ಅಡಿಕೆ ತೋಟವನ್ನು ಅದಕ್ಕೆ ಸೂಕ್ತವಾದ ಜಾಗದಲ್ಲಿ ಮಾತ್ರ ಮಾಡಬೇಕು ಎನ್ನುತ್ತಿದ್ದರು. ಅಡಿಕೆ ಬೆಳೆಯಲು…

Read more

ಅಡಿಕೆ ಮರದಲ್ಲಿ ನಳ್ಳಿಗಳು ಯಾಕೆ ಉದುರುತ್ತವೆ?

ಅಡಿಕೆ ಮರದ ಹೂ ಗೊಂಚಲಿನಲ್ಲಿ  ಇರುವ ಎಲ್ಲಾ ಮಿಡಿಗಳೂ  ಕಾಯಿ ಕಚ್ಚಿಕೊಳ್ಳುವುದಿಲ್ಲ. ಸ್ವಲ್ಪ ಉದುರುತ್ತವೆ. ಹೆಚ್ಚಿನವು ಉಳಿಯುತ್ತದೆ. ಎಲ್ಲವೂ ಉದುರಿದರೆ , ಲೆಕ್ಕಕ್ಕಿಂತ ಹೆಚ್ಚು ಉದುರಿದರೆ   ಆಗ ತಲೆ ಬಿಸಿ ಮಾಡುವ ಬದಲಿಗೆ ಕೆಲವು ನಿರ್ವಹಣೆ ಮಾಡಿ ಉಳಿಸುವ ಪ್ರಯತ್ನ ಮಾಡಬೇಕು. ಅಡಿಕೆ ಮರದ ಹೂ ಗೊಂಚಲಿನಲ್ಲಿ ಅಕ್ಕಿಯ ತರಹ ಇರುವಂತದ್ದು, ಗಂಡು ಹೂವು. ಕಡಲೆ ಗಾತ್ರದ ತರಹ ಇರುವಂತದ್ದು ಹೆಣ್ಣು ಹೂವು. ಹೂ ಗೊಂಚಲು ಅರಳಿದ ತಕ್ಷಣದಿಂದಲೇ ಗಂಡು ಹೂವು ಅರಳಲಾರಂಭಿಸುತ್ತದೆ.  ಅದು ಸುಮಾರು 24…

Read more
error: Content is protected !!