
ಅಡಿಕೆ ಗಿಡ ಮಾಡಲು ಮೊಳಕೆ ಬರಿಸುವ ಸೂಕ್ತ ವಿಧಾನ.
ಅಡಿಕೆ ಗಿಡ ಮಾಡುವಾಗ ಬೀಜದ ಗೋಟು ಅಥವಾ ಹಣ್ಣು ಅಡಿಕೆಯನ್ನು ಗರಿಷ್ಟ ಪ್ರಮಾಣದಲ್ಲಿ ಮೊಳಕೆ ಬರುವಂತೆ ಮಾಡಲು ಕೆಲವು ಸರಳ ಕ್ರಮಗಳನ್ನು ಅನುಸರಿಸಬೇಕು. ಸಾಮಾನ್ಯವಾಗಿ ನಾವು 100 ಬೀಜಗಳನ್ನು ಮೊಳಕೆ ಬರಿಸಲು ಇಟ್ಟರೆ ಅದರಲ್ಲಿ 60-80 ರಷ್ಟು ಮಾತ್ರ ಮೊಳಕೆ ಪಡೆಯುತ್ತೇವೆ. ಇದು ನಾವು ಮೊಳಕೆಗೆ ಇಡುವ ಕ್ರಮ ಸರಿಯಿಲ್ಲದೆ ಆಗುವ ಸಮಸ್ಯೆ. ಸರಿಯಾದ ಮೊಳಕೆಗೆ ಇಡುವ ವಿಧಾನ ಹೀಗಿದೆ. ಅಡಿಕೆ ತೋಟ ಇದ್ದವರು ಹಣ್ಣಾಗಿ ಬಿದ್ದು, ಹೆಕ್ಕಲು ಸಿಕ್ಕದೆ ಅವಿತುಕೊಂಡು ಬಾಕಿಯಾದ ಅಡಿಕೆ ಹೇಗೆ ತನ್ನಷ್ಟೆಕ್ಕೆ…