ಬಾಳೆಗೆ 50% ಗೊಬ್ಬರ ಕಡಿಮೆ ಮಾಡಬಹುದಾದ ವಿಧಾನ.

ಬಾಳೆ ಬೆಳೆಗೆ ಅತ್ಯಧಿಕ ಪೋಷಕಾಂಶಗಳು ಬೇಕು. ಇದು ಕಡಿಮೆ  ಸಮಯದಲ್ಲಿ ದಷ್ಟ ಪುಷ್ಟವಾಗಿ ಬೆಳೆಯುವ ಸಸ್ಯವಾದ ಕಾರಣ ಅಷ್ಟೇ ಪೋಷಕಗಳು ಬೇಕಾಗುತ್ತವೆ. ನಾವು ಕೊಡುವ ಎಲ್ಲಾ ಪೋಷಕಗಳೂ  ಮೊದಲ ಬೆಳೆಗೇ ಬಳಕೆಯಾಗದೆ ಸ್ವಲ್ಪ ಬಾಳೆಯ ಅಂಗಾಂಶಗಳಲ್ಲಿ ಉಳಿದುಕೊಂಡಿರುತ್ತದೆ. ಅದನ್ನು ಸದುಪಯೋಗಮಾಡಿಕೊಂಡರೆ  ಮುಂದಿನ ಕೂಳೆ ಬೆಳೆ ಉತ್ತಮವಾಗಿರುತ್ತದೆ. ಕಂದುಗಳೂ ಆರೋಗ್ಯವಾಗಿರುತ್ತವೆ.   ಎಲ್ಲಾ ಬೆಳೆಗಳೂ ತಮ್ಮ ಬೆಳೆವಣಿಗೆಗೆ ಬಳಕೆ ಮಾಡಿದ ಪೋಷಕಗಳನ್ನು  ಪೂರ್ಣವಾಗಿ  ಉಪಯೋಗಿಸಿಕೊಂಡಿರುವುದಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಅದು ಎಲೆಗಳಲ್ಲಿ ಉಳಿದಿರುತ್ತದೆ. ಅದು ಉದುರಿ ಬಿದ್ದಾಗ ಅದರ ಜೊತೆಗೆ…

Read more

ಉತ್ತಮ ಬಾಳೆಗೊನೆಗೆ ಎಷ್ಟು ಪೋಷಕಾಂಶ ಕೊಡಬೇಕು.

ಯಾವುದೇ ಬೆಳೆಗೆ ಅದರ ಬೆಳೆ ಅವಧಿಗನುಗುಣವಾಗಿ ಪೋಷಕಾಂಶಗಳನ್ನು  ಬಳಸಿಕೊಳ್ಳುತ್ತದೆ. ಧೀರ್ಘಾವಧಿ ಬೆಳೆಗಳು  ನಿಧಾನ ಗತಿಯಲ್ಲಿ ಪೋಷಕಗಳನ್ನು ಬಳಕೆ ಮಾಡಿಕೊಂಡರೆ ಅಲ್ಪಾವಧಿ ಬೆಳೆಗಳು ಅಧಿಕ ಪೋಷಕಗಳನ್ನು ಬಳಸಿಕೊಳ್ಳುತ್ತವೆ.   ಬಾಳೆ ಬೆಳೆ ಅಲ್ಪಾವಧಿ ಬೆಳೆ ಎಂದರೆ ತಪ್ಪಾಗಲಾರದು. ಇದು ನಾಟಿ ಮಾಡಿ 6 ರಿಂದ10  ತಿಂಗಳ ಒಳಗೆ ಫಸಲನ್ನು ಕೊಡುತ್ತದೆ. ಇಷ್ಟು ಕನಿಷ್ಟ ಅವಧಿಯಲ್ಲಿ  ಅದು ತನ್ನ ಶರೀರ ಸುಮಾರು ಕ್ವಿಂಟಾಲಿಗೂ ಹೆಚ್ಚು ಬೆಳೆಯುತ್ತದೆ. ಗೊನೆ ಹೊರ ಬೀಳುವ ಸಮಯದಲ್ಲಿ  ಮತ್ತು ಬಲಿಯುವ ಸಮಯದಲ್ಲಿ ಅದು ಇನ್ನೂ ಹೆಚ್ಚಾಗುತ್ತದೆ….

Read more
error: Content is protected !!