ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?
ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ. ಸುಳಿ…