Lighting effected coconut palm

ತೆಂಗಿನ ಮರಗಳಿಗೆ ಸಿಡಿಲು ಬಡಿದರೆ ಏನು ಮಾಡಬೇಕು?

ಈಗಾಗಲೇ ಮುಂಗಾರು ಪೂರ್ವ ಮಳೆ ಬರಲಾರಂಭಿಸಿದೆ. ಮಿಂಚು ಸಿಡಿಲಿನ ಅಬ್ಬರದಲ್ಲಿ ಬಹಳಷ್ಟು ಕಡೆ ಅಡಿಕೆ, ತೆಂಗಿನ ಮರಗಳು ಬಲಿಯಾಗುತ್ತಿವೆ. ಮಳೆಗಾಲ ಪ್ರಾರಂಭದಲ್ಲಿ ಮತ್ತು ಮಳೆಗಾಲ ಕೊನೆಯಲ್ಲಿ ಮಿಂಚು ಸಿಡಿಲಿನ ಆರ್ಭಟ ಅಧಿಕ. ಮಳೆ ಬಾರದಿದ್ದರೂ ಪ್ರಭಲವಾದ ಈ ಗುಡುಗು ಸಿಡಿಲಿನ ಆರ್ಭಟ ಇದ್ದೇ ಇರುತ್ತದೆ. ಈ ಸಿಡಿಲು ಮೋಡಗಳ ಅಪ್ಪಳಿಸುವಿಕೆಯಿಂದ ಉತ್ಪಾದನೆಯಾಗುವ ಒಂದು ವಿದ್ಯುತ್ ಶಕ್ತಿ. ಇದು ಉತ್ಪಾದನೆಯಾಗಿ  ಅರ್ಥಿಂಗ್ ಆಗಬೇಕು. ಅದು ಎತ್ತರದ ಮರಗಳು, ಅಥವಾ ಕೆಲವು ಮಿಂಚು ಆಕರ್ಶಕಗಳ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ  ತಲುಪುತ್ತದೆ….

Read more
ಬೇರು ಹುಳ ಬಾಧಿತ ತೆಂಗು

ತೆಂಗಿಗೂ ತೊಂದರೆ ಮಾಡುತ್ತಿದೆ- ಬೇರು ಹುಳ

ಎಷ್ಟೇ ಪೊಷಕಾಂಶ ಒದಗಿಸಿದರೂ ಸ್ಪಂದಿಸದೆ, ಮರದ ಗರಿಗಳು ಸದಾ ತಿಳಿ ಹಸುರು ಬಣ್ಣದಲ್ಲಿದ್ದರೆ, ಇಳುವರಿ ತೀರಾ ಕಡಿಮೆ  ಇರುವುದೇ ಆಗಿದ್ದರೆ   ಅಂತಹ ಮರಕ್ಕೆ ಬೇರು ಹುಳದ ತೊಂದರೆ  ಇದೆ ಎಂದು ಸಂಶಯ ಪಡಬಹುದು. ತೆಂಗಿನ ಮರಕ್ಕೆ  ಸಾಕಷ್ಟು ನೀರು ಒದಗಿಸಿ- ಗೊಬ್ಬರ ಕೊಡಿ ಒಂದು ವರ್ಷ ತನಕ ಕಾಯಿರಿ. ಎಲೆಗಳು ಹಸುರಾಗದೇ, ಗರಿಗಳು ಹೆಚ್ಚದೇ ಇದ್ದರೆ ಅಂತಹ ಮರಗಳಿಗೆ ಬೇರು ಹುಳ ಬಾಧಿಸಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳಲ್ಲೆಲ್ಲಾ ಬಹುತೇಕ ಹೆಚ್ಚು ಕಡಿಮೆ …

Read more
ಉತ್ತಮ ಇಳುವರಿಯ ತೆಂಗಿನ ಮರ

ತೆಂಗು- ಅಧಿಕ ಇಳುವರಿಯ ಗುಟ್ಟು ಇದು.

ಇತ್ತೀಚೆಗೆ ಥೈಲಾಂಡ್ ನ ತೆಂಗು ತೋಟದ ಒಂದು ವೀಡಿಯೋ ಎಲ್ಲರ ಫೇಸ್ ಬುಕ್, ವಾಟ್ಸ್ ಆಪ್ ಗಳಲ್ಲಿ ಒಡಾಡಿದೆ. ಇದು ನಮಗೆ ಹೇಗೆ ತೆಂಗು ಬೆಳೆದರೆ ಉತ್ತಮ ಎಂಬ ಕೆಲವು ಸಂಗತಿಗಳನ್ನು ತಿಳಿಸುತ್ತದೆ.  ತೆಂಗಿನ ಸಸಿ ನಾಟಿ ಮಾಡಿದ 4 -6 ವರ್ಷಕ್ಕೇ ಫಸಲಿಗಾರಂಭಿ ಸುತ್ತದೆ. ಒಂದು ತೆಂಗಿನ ಮರವು  ಸುಮಾರು 30-40 ರಷ್ಟು ಗರಿಗಳು ಹಾಗೂ 100 ಕ್ಕೂ ಹೆಚ್ಚಿನ ಕಾಯಿಗಳನ್ನು  ಧರಿಸಬೇಕಾದರೆ ಅದು ಎಷ್ಟೊಂದು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಸಿಕೊಳ್ಳಬೇಕು ಊಹಿಸಿ!. ಪ್ರತೀ ವರ್ಷವೂ ಫಸಲಿಗೆ…

Read more
error: Content is protected !!