ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.
ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ ಪ್ರಭಲವಾದದ್ದು ಕೆಂಪು ಮೂತಿ ದುಂಬಿ…