ತೆಂಗು -ಇಂಥಹ ನ್ಯೂನತೆಗೆ ಪರಿಹಾರ ಏನು?
ಮನುಷ್ಯರಲ್ಲಿ ಒಬ್ಬರಿಗೊಬ್ಬರಿಗೆ ಸಾಮ್ಯತೆ ಇಲ್ಲ ಎಂಬುದು ನಮಗೆಲ್ಲಾ ತಿಳಿದಿರುವ ಸಂಗತಿ.ಅದೇ ರೀತಿಯಲ್ಲಿ ಸಸ್ಯಗಳಲ್ಲೂ ಒಂದು ಸಸ್ಯ ದಂತೆ ಮತ್ತೊಂದು ಸಸ್ಯ ಇರುವುದಿಲ್ಲ. ಪ್ರತಿಯೊಂದಕ್ಕೂ ಅದರದ್ದೇ ಆದ ವಿಭಿನ್ನ ಗುಣ ಇರುತ್ತದೆ. ಆ ಪ್ರಕಾರವೇ ಬೆಳವಣಿಗೆ ಇರುತ್ತದೆ. ತೆಂಗಿನ ವಿಚಾರದಲ್ಲೂ ಇದು ಪ್ರಸ್ತುತ. ನಾವು ನೆಟ್ಟು ಬೆಳೆಸುವ ತೆಂಗು ನಾಟಿ ಮಾಡಿ ನಾಲ್ಕರಿಂದ ಐದು ವರ್ಷಕ್ಕೆ ಫಸಲಿಗೆ ಆರಂಭವಾಗುತ್ತದೆ. ಆ ಸಮಯದ ವರೆಗೆ ಆ ಸಸಿ ಯಾವ ರೀತಿ ಫಲ ಕೊಡಬಹುದು ಎಂಬುದನ್ನು ಕರಾರುವಕ್ಕಾಗಿ ಹೇಳಲಿಕ್ಕೆ ಬರುವುದಿಲ್ಲ. ಕೆಲವು…