ಅಡಿಕೆಯ ಕಥೆ ವ್ಯಥೆಯಾಗುವ ಮುನ್ಸೂಚನೆ
ರಾಜ್ಯ ಸರಕಾರ ಜನತೆಗೆ ಮನೆ ಹೊರಡದಂತೆ ಕರ್ಫ್ಯೂ ವಿಧಿಸಿದೆ. ಅಗತ್ಯ ಸಾಮಾಗ್ರಿಗಳಿಗೆ ವಿನಾಯಿತಿ ನೀಡಿದ್ದರೂ ಅಡಿಕೆ ಎಂಬುದು ಅಗತ್ಯ ಸಾಮಾಗ್ರಿಗಳ ಅಡಿಯಲ್ಲಿ ಬಾರದ ಕಾರಣ ಅಡಿಕೆ ಕೊಳ್ಳುವವರು ತಮ್ಮ ವ್ಯವಹಾರ ನಿಲ್ಲಿಸುವುದು ಗ್ಯಾರಂಟಿ. ಇನ್ನು ವ್ಯಾಪಾರ ಏನಿದ್ದರೂ ಪರಿಸ್ಥಿತಿ ಅನುಕೂಲಕರವಾಗಿ ಬಂದರೆ ಎಪ್ರೀಲ್ 1 ತರುವಾಯ. ಅಡಿಕೆ, ಕರಿಮೆಣಸು , ಶುಂಠಿ ಮುಂತಾದ ಕೃಷಿ ಉತ್ಪನ್ನಗಳ ಮಾರುಕಟ್ಟೆ ಎಂಬುದು ಪರಿಸ್ಥಿತಿ ಸರಿಯಾಗಿದ್ದರೆ ಎಲ್ಲವೂ ಸಲೀಸಾಗಿ ಮುಂದುವರಿಯುತ್ತದೆ. ಎಲ್ಲಾದರೂ ಸ್ವಲ್ಪ ಪರಿಸ್ಥಿತಿ ಬಿಗಡಾಯಿಸಿದರೆ ಹೇಗೆ ಮಾರುಕಟ್ಟೆ ಕುಸಿಯುತ್ತದೆ ಎಂದೇ…