ಸಗಣಿ ಗೊಬ್ಬರ – ಪರಿಪೂರ್ಣ ಸಾವಯವ ಪೋಷಕವಲ್ಲ.
ಕೆಲವು ರೈತರು ನಾನು ನನ್ನ ಬೆಳೆಗಳಿಗೆ ಹಸುವಿನ ಸಗಣಿ ಗೊಬ್ಬರವನ್ನು ಮಾತ್ರ ಕೊಡುವುದು ಎನ್ನುತ್ತಾರೆ. ಮರಗಳು ಹಚ್ಚ ಹಸುರಾಗಿ ಬೆಳೆಯುತ್ತವೆಯಾದರೂ ಪರಿಪೂರ್ಣ ಪೋಷಕಗಳು ಇಲ್ಲದ ಕಾರಣ ಫಸಲು ಅಷ್ಟಕ್ಕಷ್ಟೇ.ಯಾವುದೇ ಪ್ರಾಣಿಯ ತ್ಯಾಜ್ಯಗಳಿಂದ ಪಡೆಯುವ ಹಿಕ್ಕೆ ಅಥವಾ ಮಲದಲ್ಲಿ ಎಷ್ಟು ಪೋಷಕಗಳಿರುತ್ತವೆ ಎಂಬುದು ಹಲವಾರು ಸಂಗತಿಗಳ ಮೇಲೆ ಅವಲಂಭಿಸಿದೆ. ಪ್ರಾಣಿಯ ದೇಹ, ಅವುಗಳ ತಳಿ, ವಯಸ್ಸು, ತೂಕ, ಆಹಾರ ಸೇವಿಸುವುದರ ಮೇಲೆ ಅವು ಮಾಡಿಕೊಡುವ ಗೊಬ್ಬರದ ಪ್ರಮಾಣ ಹೊಂದಿರುತ್ತದೆ. ಇಷ್ಟು ಮಾತ್ರವಲ್ಲ ಆ ಪ್ರಾಣಿಯ ಆರೋಗ್ಯ ಮತ್ತು ಅದು…