ಡ್ರಾಗನ್ ಪ್ರೂಟ್ – ಹೆಚ್ಚು ಆದಾಯದ ಸುಲಭದ ಬೆಳೆ.
ವಿಪರೀತ ಬಿಸಿಲಿನ ವಾತಾವರಣದ ಬಳ್ಳಾರಿ ಜಿಲ್ಲೆಯಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯ ಮಾಡಬಹುದು ಎಂಬುದನ್ನು ಹೊಸಪೇಟೆಯ ರೈತರೊಬ್ಬರು ತೋರಿಸಿಕೊಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯಲ್ಲಿನ 57 ವರ್ಷದ ಇಂಜಿನಿಯರ್ ರಾಜಶೇಖರ್ ದ್ರೋಣವಲ್ಲಿ ಎಂಬವರು, ತಮ್ಮ ಆರು ಎಕರೆ ಜಮೀನಿನಲ್ಲಿ ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಮಾಡಿ ಅದರಲ್ಲಿ ಉತ್ತಮ ಆದಾಯ ಕಂಡುಕೊಂಡಿದ್ದಾರೆ. ಮೂಲ ಕೃಷಿಕ ಕುಟುಂಬದವರಾಗಿದ್ದರೂ ಹೈದರಾಬಾದಿನಲ್ಲಿ ಇಂಜಿನಿಯರ್ ವೃತ್ತಿಯಲ್ಲಿ ತೊಡಗಿದ್ದರು. ಮೂರು ವರ್ಷದ ನಂತರ ಈ ವೃತ್ತಿಗೆ ವಿದಾಯ ಹೇಳಿ ಆರಿಸಿಕೊಂಡದ್ದು, ಕೃಷಿ ಮತ್ತು ಕೋಳಿ ಸಾಕಾಣಿಕೆ ವೃತ್ತಿಯನ್ನು. ಇವೆರಡರಲ್ಲೂ…