![ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ – ಪೊಟ್ಯಾಶಿಯಂ ಮ್ಯುರೇಟ್ ಆಫ್ ಪೊಟ್ಯಾಶ್ - ಉತ್ತಮ ಗೊಬ್ಬರ](https://kannada.krushiabhivruddi.com/wp-content/uploads/2020/07/IMG_20210129_093827-FILEminimizer.jpg?v=1655890429)
ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ – ಪೊಟ್ಯಾಶಿಯಂ
ನಿಮ್ಮ ಬೆಳೆಗಳು ಹಚ್ಚ ಹಸುರಾಗಿ ಬೆಳೆದಿರುತ್ತವೆ. ಆದರೆ ಇಳುವರಿ ಮಾತ್ರ ತೀರಾ ಕಡಿಮೆ ಇರುತ್ತದೆ.ಬರುವ ಇಳುವರಿಯ ಗುಣಮಟ್ಟವೂ ಚೆನ್ನಾಗಿರುವುದಿಲ್ಲ. ಇದಕ್ಕೆಲ್ಲಾ ಕಾರಣ ಪೊಟ್ಯಾಶಿಯಂ ಎಂಬ ಪೋಷಕದ ಕೊರತೆ. ಪೊಟ್ಯಾಶಿಯಂ ಲಭ್ಯವಾದರೆ ಮಾತ್ರ ಕೈಗೆ ಬಂದ ತುತ್ತು ಬಾಯಿಗೆ ಬರಲು ಸಾಧ್ಯ. ಇದು ಬೆಳೆಗಳಿಗೆ ಶಕ್ತಿ ಕೊಡುವ ಗೊಬ್ಬರ. ನಮ್ಮ ದೇಶದ ಬಹಳ ಜನಕ್ಕೆ ಸಮತೊಲನದ ಗೊಬ್ಬರ ಎಂದರೆ ಏನು ಎಂಬುದು ಇನ್ನೂ ತಿಳಿದಿಲ್ಲ. ಅದಕ್ಕೆ ಸರಿಯಾಗಿ ನಮ್ಮಲ್ಲಿ ಪೊಷಕಾಂಶಗಳನ್ನು ಒದಗಿಸುವವರೂ ಮಾರಾಟ ಚಾಕಚಕ್ಯತೆಯನ್ನು ತೋರುತ್ತಿವೆ. ಬರೇ ಗೊಬ್ಬರದ…