ಶುಂಠಿ – ಉತ್ತಮ ಬೀಜದ ಗಡ್ಡೆ ಆಯ್ಕೆ.
ಶುಂಠಿಯ ಬಿತ್ತನೆ ಗಡ್ಡೆ ಮಾರಲು ಅದೆಷ್ಟು ಏಜೆಂಟರೋ. ಈಗಲೇ ಅವರ ವ್ಯವಹಾರ ಕುದುರುವುದು. ಅಮಾಯಕ ಹೊಸ ಬೆಳೆಗಾರರು ಇವರ ಬಲೆಗೇ ಬೀಳುವುದು. ಹೆಚ್ಚಿನ ರೈತರು ಬೀಜದ ಗಡ್ಡೆ ಆಯ್ಕೆ ಮಾಡುವಾಗ ತಪ್ಪುತ್ತಾರೆ. ಇದರಿಂದ ಮುಂದೆ ಬೆಳೆಯಲ್ಲಿ ರೋಗಗಳು ಖಾಯಂ ಆಗುತ್ತವೆ.ಶುಂಠಿಯ ಬೆಳೆಯಲ್ಲಿ ರೋಗ ಮುಕ್ತ ಬಿತ್ತನೆ ಗಡ್ದೆಯೇ ಪ್ರಮುಖ ಹೆಜ್ಜೆ ! ಶುಂಠಿ ಬೆಳೆಸಬೇಕೆಂದಿರುವಿರಾದರೆ ನೀವು ಬೆಳೆ ಇರುವ ಹೊಲವನ್ನು ನೋಡಿ ಬೀಜದ ಗಡ್ಡೆ ಆಯ್ಕೆ ಮಾಡಬೇಕು ಎನ್ನುತ್ತಾರೆ. ಹಲವಾರು ವರ್ಷಗಳಿಂದ ಶುಂಠಿ ಬೆಳೆಯುವ ಅನುಭವಿಗಳು ತಮಗೆ…