ಉತ್ತಮ ಇಳುವರಿ ನೀಡಬಲ್ಲ ತೆಂಗಿನ ಸಸಿಯ ಲಕ್ಷಣಗಳು ಹೇಗೆ ಇರಬೇಕು?
ಧೀರ್ಘಾವಧಿ ಬೆಳೆಗಳಲ್ಲಿ ಸಸ್ಯ ಮೂಲವನ್ನು ಆರಿಸುವಾಗ ನಮಗೆ ಸ್ವಲ್ಪ ಮಟ್ಟಿಗೆ ಸಸಿ ಹೀಗೆ ಇದ್ದರೆ ಉತ್ತಮ ಎಂಬ ಮಾನದಂಡಗಳನ್ನು ತಿಳಿದಿದ್ದರೆ ಒಳ್ಳೆಯದು. ಕಾರಣ ಈ ಗಿಡ ನೆಟ್ಟು ಪ್ರತಿಫಲ ತೋರಿಸಲು 5-6 ವರ್ಷ ಬೇಕು. ಆಗ ನಮ್ಮ ಆಯ್ಕೆ ಸ್ವಲ್ಪ ತಪ್ಪಿದ್ದರೆ ಅಷ್ಟೂ ವರ್ಷ ನಷ್ಟ. ಇದಕ್ಕಾಗಿ ಪ್ರತೀಯೊಬ್ಬ ತೆಂಗು ಬೆಳೆಯುವವನೂ ತೆಂಗಿನ ಉತ್ತಮ ಗಿಡದ ಲಕ್ಷಣಗ ಗಳು ಹೀಗೆ ಇರಬೇಕು ಎಂಬುದನ್ನು ತಿಳಿದಿದ್ದರೆ ಒಳ್ಳೆಯದು. ತೆಂಗು ಮಿಶ್ರ ಪರಾಗಸ್ಪರ್ಷದ ಮೂಲಕ ಕಾಯಿ ಕಚ್ಚುವ ಸಸ್ಯವಾಗಿದು, ಯಾವ ಮರದ ಕಾಯಿಯನ್ನು…