ಇದು ಭಾರೀ ಬೇಡಿಕೆಯ ಗುಳ್ಳ ಬದನೆ.
ಕರಾವಳಿಯ ಬದನೆ ತಳಿಗಳಲ್ಲಿ ಹೆಸರುವಾಸಿಯಾದ ಮಟ್ಟು ಗುಳ್ಳಕ್ಕೆ ಸರಿಸಾಟಿಯಾದ ಮತ್ತೊಂದು ಗುಳ್ಳ ,ಇದೇ ಉಡುಪಿ ಜಿಲ್ಲೆಯ ಮತ್ತೊಂದೆಡೆಯೂ ಬೆಳೆಯುತ್ತಿದೆ. ಇದರ ಆಕಾರ ಬಣ್ಣ ಎಲ್ಲವೂ ಏಕಪ್ರಕಾರ. ಒಂದೇ ಒಂದು ವ್ಯತ್ಯಾಸ ಎಂದರೆ ಮಟ್ಟು ಗುಳ್ಳಕ್ಕೆ ತೊಟ್ಟಿನಲ್ಲಿ ಮುಳ್ಳು ಇದೆ. ಇದಕ್ಕೆ ಇಲ್ಲ. ಕರಾವಳಿಯ ಜನರ ಬಲು ಅಚ್ಚುಮೆಚ್ಚಿನ ಗುಳ್ಳ ಬದನೆಯ ಆಸೆಯನ್ನು ಪೂರೈಸಿದ ಬದನೆಯಲ್ಲಿ ಈ ಊರಿನ ಬದನೆ ಒಂದು. ಕರಾವಳಿಯ ಜನ ಎಲ್ಲೇ ಹೋಗಲಿ ಗುಳ್ಳ ಬದನೆ ಸಿಕ್ಕರೆ ಎಷ್ಟೇ ಬೆಲೆ ಕೊಟ್ಟಾದರೂ ಖರೀದಿ ಮಾಡುತ್ತಾರೆ….