ತಿಂಗಳಿಗೆ 30,000 ಸಂಪಾದನೆ ಮಾಡುವ ಸರಳ ವೃತ್ತಿ.
ಜನ ಕೆಲಸ ಇಲ್ಲ. ಸಂಪಾದನೆ ಇಲ್ಲ. ಸರಕಾರ ನಮ್ಮ ನೆರವಿಗೆ ಬರಬೇಕು. ನಮಗೆ ಅದು ಕೊಡಬೇಕು. ಇದು ಕೊಡಬೇಕು ಎಂದು ಹರಟೆ ಹೊಡೆಯುತ್ತಾ ಕಾಲ ಹರಣ ಮಾಡಬೇಕಾಗಿಲ್ಲ. ಅತೀ ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 30,000 ಸಂಪಾದನೆ ಮಾಡಬಹುದು. ಇದು ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಜಾನಕಲ್ ಸೇವನಗರ ಗ್ರಾಮದ ಪ್ರಿಯಾಂಕ್ ಎಂಬ 22 ವರ್ಷದ ಯುವಕ ಹೇಳುವ ಮಾತು. ಇವರು ಬಿ ಬಿ ಎಂ ವ್ಯಾಸಂಗ ಮಾಡುತ್ತಲೇ ಟಗರು ಸಾಕಣೆ ಮಾಡಿ ತಿಂಗಳಿಗೆ 30,000 ರೂ ಸಂಪಾದನೆ ಮಾಡುತ್ತಿದ್ದಾರೆ….