100 ತೆಂಗಿನ ಮರಕ್ಕೆ 10000 ಕಾಯಿ ಹೇಗೆ ಪಡೆಯಲು ಬೇಕಾದ ಆರೈಕೆ.
ತೆಂಗಿನ ಮರವೊಂದರ ಇಳುವರಿ ಸಾಮರ್ಥ್ಯದಷ್ಟನ್ನು ನಾವು ಪಡೆಯುತ್ತಿಲ್ಲ. ಯಾರಿಗೆ 100 ತೆಂಗಿನ ಮರಕ್ಕೆ 10,000 ತೆಂಗಿನಕಾಯಿ ಆಗುತ್ತದೆಯೋ ಅವರಿಗೆ ತೆಂಗು ಕೃಷಿ ಲಾಭದಾಯಕ. 10000 ಕಾಯಿಗಿಂತ ಹೆಚ್ಚು ಪಡೆಯಲು ಹಾಕಬೇಕಾದ ಗೊಬ್ಬರ ಮತ್ತು ಮಾಡಬೇಕಾದ ಆರೈಕೆ ಇವು. ತೆಂಗು ಒಂದು ಏಕದಳ ಸಸ್ಯ. ಇದಕ್ಕೆ ತಾಯಿ ಬೇರು ಇಲ್ಲ. ಇರುವ ಎಲ್ಲಾ ಹಬ್ಬು ಬೇರುಗಳೂ ಆಹಾರ ಸಂಗ್ರಹಿಸಿ ಕೊಡುವ ಬೇರುಗಳಾಗಿದ್ದು, ನಿರಂತರವಾಗಿ ನಿರ್ದಿಷ್ಟ ಪ್ರಮಾಣದ ಪೋಷಕಗಳನ್ನು ಕೊಟ್ಟರೆ ಇದು ಗರಿಷ್ಟ ಇಳುವರಿಯನ್ನು ಕೊಡಬಲ್ಲುದು. ತೆಂಗಿನ ಉತ್ತಮ ಇಳುವರಿಗೆ …