ಅಡಿಕೆ ಹೂಗೊಂಚಲು ಒಣಗುತ್ತಿದೆಯೇ ? ಯಾವ ಕಾರಣ- ಪರಿಹಾರ.
ಅಧಿಕ ಆದಾಯದ ಅಡಿಕೆ ಬೆಳೆಯಲ್ಲಿ ಹೂಗೊಂಚಲು ಒಣಗುವ ಸಮಸ್ಯೆ ಅತೀ ದೊಡ್ಡದು. ಇದಕ್ಕೆ ಪರಿಹಾರ ಸಿಂಗಾರಕ್ಕೆ ಸಿಂಪರಣೆ ಒಂದೇ.ರಾಸಾಯನಿಕ ಸಿಂಪರಣೆ ಇಷ್ಟವಿಲ್ಲದವರು ಮರದಲ್ಲಿ ಒಣಗಿದ ಹೂಗೊಂಚಲು ಶೇಷವನ್ನು ಸಂಪೂರ್ಣವಾಗಿ ತೆಗೆದು ಸ್ವಲ್ಪ ಮಟ್ಟಿಗೆ ನಷ್ಟದಿಂದ ಪಾರಾಗಬಹುದು. ಕಳೆದ ವರ್ಷ ಅಡಿಕೆ ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡಿದ್ದಾರೆ. ಕಾರಣ ಉತ್ತಮ ಹೂ ಗೊಂಚಲು ಇತ್ತು. ಆದರೆ ಹೂ ಗೋಂಚಲೆಲ್ಲಾ ಒಣಗಿ ಹಾಳಾಗಿದೆ. ಇದರಿಂದಾಗಿ ಬೆಳೆ ಸುಮಾರು 30% ನಷ್ಟವಾಗಿದೆ. ಈ ವರ್ಷ ಹಾಗಾಗಬಾರದು ಎಂದು ಬೆಳೆಗಾರರು…