ತೆಂಗಿನ ಮರಕ್ಕೆ ಈಗ ಹಾಕಿದ ಗೊಬ್ಬರದಿಂದ ಇಳುವರಿ ಸಿಗುವುದು ಯಾವಾಗ?
ಹೆಚ್ಚಿನ ರೈತರು ಹೇಳುವುದುಂಟು, ಈ ವರ್ಷ ನಾವು ತೆಂಗಿನ ಮರಕ್ಕೆ ಸಾಕಷ್ಟು ಗೊಬ್ಬರ ಕೊಟ್ಟಿದ್ದೇವೆ. ಮುಂದಿನ ವರ್ಷ ಫಸಲು ಹೆಚ್ಚಬಹುದು ಎಂದು. ಆದರೆ ವಾಸ್ತವಿಕತೆ ಬೇರೆಯೇ ಇದೆ. ಈ ವರ್ಷ ಹಾಕಿದ ಗೊಬ್ಬರದ ಫಲದಲ್ಲಿ ಮುಂದಿನ ವರ್ಷ ಇಳುವರಿಯಲ್ಲಿ ದೊರೆಯುವುದಿಲ್ಲ. ಅದು ದೊರೆಯುವುದು ಮುಂದಿನ 32 ತಿಂಗಳ ನಂತರ. ತೆಂಗಿನ ಮರದ ಕಾಂಡದಲ್ಲಿ ಹುಟ್ಟುವ ಅದರ ಹೂ ಗೊಂಚಲು ಮೊನ್ನೆ ಮೊನ್ನೆಮೂಡಿದ್ದು ಎಂದು ತಿಳಿಯದಿರಿ. ಇದರೆ ಹುಟ್ಟು,(Innitiation) ಸುಮಾರು ಮೂರು ವರ್ಷಗಳ ಹಿಂದೆಯೇ ಆಗಿರುತ್ತದೆ. ಆಗಲೇ ಅದರಲ್ಲಿ…