ಅಂತರ್ಜಲ ಬಳಕೆಗೂ ಬೇಕು – ಲಾಕ್ ಡೌನ್ .
ಒಂದುವರೆ ತಿಂಗಳ ಕಾಲ ಅಂತರ್ಜಲದೊಂದಿಗಿನ ಅತ್ಯಾಚಾರಕ್ಕೆ ಸ್ವಲ್ಪ ಬಿಡುವಾಗಿತ್ತು. ಆದರೂ ರಾತ್ರೆ ಹೊತ್ತು ಹಳ್ಳಿಯ ಮೂಲೆಗಳಲ್ಲಿ ವ್ಯವಹಾರ ನಡೆಯುತ್ತಿತ್ತು. ಈಗ ಮತ್ತೆ ಅತ್ಯಾಚಾರ ಪ್ರಾರಂಭವಾಗಿದೆ. ಹಳ್ಳಿಯ ಪೆಟ್ರೋಲ್ ಪಂಪುಗಳ ಮುಂದೆ ಮೂರು ನಾಲ್ಕು ಬೋರ್ ಲಾರಿಗಳು ಮೊಕ್ಕಾಂ ಹೂಡಿವೆ. ಒಂದು ತಿಂಗಳು ಅಂತರ್ಜಲಕ್ಕೆ ಬಿಡುಗಡೆ ಸಿಕ್ಕಿದೆ. ಹಾಗೆಯೇ ವರ್ಷದಲ್ಲಿ 2-3 ತಿಂಗಳು ಬಿಡುವು ಕೊಟ್ಟರೆ ಅದೆಷ್ಟೋ ಅಂತರ್ಜಲ ಶೋಷಣೆ ಕಡಿಮೆಯಾಗಬಹುದು. ಅಂತರ್ಜಲದ ಕ್ಷೀಣಿಸುತ್ತಿದೆ: ನಮ್ಮಲ್ಲಿ ಒಂದಷ್ಟು ಜನ ಬೆಳೆಗಳ ಅವಶ್ಯಕತೆಗೆ ಬೇಕಾದಷ್ಟೇ ಬಳಸಲು ಅಂತರ್ಜಲವನ್ನು ಆವಲಂಭಿಸಿಲ್ಲ. ಅದನ್ನು…