ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?
ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್ ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು. ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…