ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.
ನಮ್ಮ ಸುತ್ತಮುತ್ತ ಇರುವ ಕೆಲವು ಗಿಡಗಳು ಬೇರೆ ಬೇರೆ ಸತ್ವಗಳನ್ನು ಒಳಗೊಂಡಿವೆ. ಕೆಲವು ಪೋಷಕವಾಗಿಯೂ ಮತ್ತೆ ಕೆಲವು ಕೀಟ – ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಇವುಗಳನ್ನು ಕಳೆ ನಾಶಕಗಳು ಬಲಿ ತೆಗೆದುಕೊಳ್ಳುತ್ತಿವೆ. ರೈತರೇ ಇವುಗಳನ್ನು ಅನವಶ್ಯಕ ಕೊಲ್ಲಬೇಡಿ. ಅದರ ಸದುಪಯೋಗ ಮಾಡಿಕೊಳ್ಳಿ. ಏನಿದೆ ಸತ್ವ: ಸಾಮಾನ್ಯವಾಗಿ ಸಾವಯವ ವಿಧಾನದಲ್ಲಿ ಬೇಸಾಯ ಮಾಡುವಾಗ ಸಾರಜನಕ ಮೂಲವನ್ನು ಬೇಕಾದಷ್ಟು ಪ್ರಮಾಣದಲ್ಲಿ ಹೊಂದಿಸಿಕೊಳ್ಳಲಿಕ್ಕಾಗುತ್ತದೆ. ಆದರೆ ರಂಜಕ ಮತ್ತು ಪೊಟ್ಯಾಶಿಯಂ ಸತ್ವಗಳನ್ನು ಬೇಕಾದಷ್ಟು ಪ್ರಮಾಣದಲ್ಲಿ ಹೊಂದಿಸಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ…