ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.
ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ. ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…