ಅಡಿಕೆ ಮರದ ಸುಳಿ ಬಂದ್ ರೋಗ ನಿವಾರಣೆ ಹೇಗೆ ?
ಅಡಿಕೆ ಸಸ್ಯದ ಸುಳಿಯ ಭಾಗದ ಎಲೆಗಳು ಮುರುಟಿ, ತುದಿ ಗಂಟು ಕಟ್ಟಿದಂತೆ ಅಗುವುದಕ್ಕೆ “ಬಂದ್ ರೋಗ” ಎನ್ನುತ್ತಾರೆ. ಇದು ರೋಗವಲ್ಲ ಬೇರು ಜಂತು ಹುಳ ಮುಖ್ಯ ಕಾರಣ. ಇದು ಬೇರನ್ನು ಬೆಳೆಯಲು ಬಿಡದೆ ಸಸ್ಯಕ್ಕೆ ಆಹಾರ ಸರಬರಾಜು ಕಡಿಮೆಯಾಗಿ ಅದರ ಬೆಳೆವಣಿಗೆಯನ್ನು ಹತ್ತಿಕ್ಕುತ್ತದೆ. ಇದನ್ನು ರಾಸಾಯನಿಕವಾಗಿಯೂ, ಜೈವಿಕವಾಗಿಯೂ ಹತೋಟಿ ಮಾಡಬಹುದು. ವರ್ಷದಿಂದ ವರ್ಷಕ್ಕೆ ಅಡಿಕೆ ಬೆಳೆಗಾರರ ತೋಟದಲ್ಲಿ ಮರಗಳ ಸುಳಿ ಭಾಗ ಕುಬ್ಜವಾಗುವುದು ಹೆಚ್ಚಾಗುತ್ತಿದೆ. ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ ಇದು ಸುಮಾರು 30-40 ವರ್ಷದ ಹಿಂದೆಯೇ ಇತ್ತು….