
ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.
ಕೆಲವು ಮಣ್ಣಿನಲ್ಲಿ ಮಳೆ ಬಂದರೆ ನೀರು ವಾರಗಟ್ಟಲೆ ಆರುವುದೇ ಇಲ್ಲ. ಬಿಸಿಲು ಬಂದರೆ ನೆಲ ಟಾರು ರಸ್ತೆ ತರಹ. ಇಂತಲ್ಲಿ ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ. ಕಪ್ಪು ಹತ್ತಿ ಮಣ್ಣು ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…