ಬಸವನ ಹುಳು ನಿಯಂತ್ರಣ
ಕೆಲವು ವರ್ಷಗಳ ಹಿಂದೆ ಶಿವಮೊಗ್ಗದ ಬಿದ್ರಳ್ಳಿಯಲ್ಲಿ ಕಂಡಿದ್ದ ಈ ಬಸವನ ಹುಳ ಈಗ ಎಲ್ಲೆಡೆಯಲ್ಲೂ ಕಂಡು ಬರುತ್ತಿದೆ. ರೈತರು ಇದರಿಂದ ಬೇಸತ್ತಿದ್ದಾರೆ. ಕೊಲ್ಲುತ್ತಾರೆ. ಮತ್ತೆ ಹುಟ್ಟುತ್ತದೆ. ಯಾವ ರೀತಿ ನಿಯಂತ್ರಣ ಎಂದೇ ಗೊತ್ತಾಗುವುದಿಲ್ಲ. ಇವು ಮರದ ಮೇಲೆಲ್ಲಾ ಏರಿಕೊಂಡು ಕುಳಿತಿವೆ. ಹಗಲು ನಾಲ್ಕು– ಐದು ಇದ್ದರೆ, ಕತ್ತಾಲಾದರೆ ಮರದ ತುಂಬಾ ಏರಿ ಬಿಡುತ್ತವೆ. ಇವು ದೊಡ್ಡ ಗಾತ್ರದ ಬಸವನ ಹುಳುಗಳು. ಇವು ಅಡಿಕೆ ಮರದ ಎಳೆ ಎಲೆಗಳನ್ನು ಮತ್ತು ಪಕ್ಕದಲ್ಲಿರುವ ಇತರ ಗಿಡಗಳ ಎಳೆ ಎಲೆಗಳನ್ನು ತಿನ್ನುತ್ತವೆ. …