ಆಡಿಕೆ ಗರಿ ಹಳದಿಯಾಗಲು ಇದು ಕಾರಣ.
ಸಸ್ಯಗಳಿಗೆ ಉತ್ತಮ ಬಿಸಿಲು ದೊರೆತಾಗ ಅವುಗಳ ಎಲೆಗಳು ಹೆಚ್ಚು ಹೆಚ್ಚು ಉಸಿರಾಟ ಕ್ರಿಯೆ ನಡೆಸಿ ಚೆನ್ನಾಗಿ ಬೆಳೆಯುತ್ತವೆ. ಆದರೆ ಕೆಲವೊಮ್ಮೆ ಈ ಅತಿಯಾದ ತಾಪಮಾನ ಕೆಲವು ಕೀಟಗಳನ್ನು ಆಕರ್ಷಿಸುತ್ತವೆ. ಇಂತದ್ದರಲ್ಲಿ ಒಂದು ಅಡಿಕೆಯ ಗರಿಯಲ್ಲಿ ವಾಸ ಮಾಡುವ ಕೆಂಪು ಮತ್ತು ಬಿಳಿ ತಿಗಣೆ. ಅಡಿಕೆ ಬೆಳೆಗೆ ಸಹ್ಯ ತಾಪಮಾನ 35 ಡಿಗ್ರಿ ತನಕ. ಅದಕ್ಕಿಂತ ಹೆಚ್ಚಾದರೆ ಅದು ಸಹಿಸಿಕೊಳ್ಳುವುದಿಲ್ಲ. ಅದಕ್ಕಾಗಿಯೇ ನಮ್ಮ ಹಿರಿಯರು ಅಡಿಕೆ ತೋಟವನ್ನು ಅದಕ್ಕೆ ಸೂಕ್ತವಾದ ಜಾಗದಲ್ಲಿ ಮಾತ್ರ ಮಾಡಬೇಕು ಎನ್ನುತ್ತಿದ್ದರು. ಅಡಿಕೆ ಬೆಳೆಯಲು…