ಕಳೆ ಹೆಚ್ಚು ಇದ್ದಲ್ಲಿ ಬೆಳೆ ತುಂಬಾ ಕಡಿಮೆ.
ಬಹಳ ಜನ ಬೆಳೆಗಳಿಗೆ ನೀರು ಕೊಟ್ಟಷ್ಟೂ ಒಳ್ಳೆಯದು ಎಂಬು ಭಾವಿಸುತ್ತಾರೆ. ಮಳೆಗಾಲದ ಮಳೆಗೆ ನೆಲ ಮತ್ತು ಸಸ್ಯಗಳು ಹೇಗೆ ಇರುತ್ತವೆಯೋ ಅದೇ ರೀತಿ ಬೇಸಿಗೆಯಲ್ಲಿಯೂ ಇರುವಂತೆ ನೋಡಿಕೊಳ್ಳುತ್ತಾರೆ. ನಮ್ಮ ಈ ವಿಧಾನದಿಂದಾಗಿ ಭೂಮಿಯಲ್ಲಿ ವರ್ಷದಿಂದ ವರ್ಷಕ್ಕೆ ಫಲವತ್ತತೆ ಕ್ಷೀಣಿಸುತ್ತದೆ. ಇಳುವರಿಯೂ ಕಡಿಮೆಯಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ: ಸಾಮಾನ್ಯವಾಗಿ ನಿರಂತರ 3-4 ವರ್ಷ ಗೊಬ್ಬರ ಕೊಡುತ್ತಿದ್ದರೆ , ಒಂದು ವರ್ಷ ಏನೂ ಗೊಬ್ಬರ ಕೊಡದಿದ್ದರೂ ಬೆಳೆಯಲ್ಲಿ ಇಳುವರಿ ಕಡಿಮೆಯಾಗಬಾರದು. ಆದರೆ ಆಗುತ್ತದೆ. ಕಾರಣ ನಾವು ವರ್ಷ ವರ್ಷ ಕೊಡುವ…