ರೋಗ- ಕೀಟಗಳ ಹಾನಿ ಕಡಿಮೆ ಮಾಡಲು ತರಕಾರಿ ಬೆಳೆಗೆ ಮಲ್ಚಿಂಗ್ ಶೀಟು ಹಾಕಿ.
ಇಂದು ನಾವು ಹೇರಳವಾಗಿ ತರಕಾರಿಗಳನ್ನು ಬೆಳೆದು ಬಳಸುತ್ತಿದ್ದರೆ, ಆ ಯಶಸ್ಸಿನ ಹಿಂದೆ ಮಲ್ಚಿಂಗ್ ಶೀಟು ಎಂಬ ತಂತ್ರಜ್ಞಾನದ ಕೊಡುಗೆ ಬಹಳ ಇದೆ. ಇದು ಇಲ್ಲವಾಗಿದ್ದರೆ ಬಹುಶಃ 25-30% ಬೆಳೆ ಕಡಿಮೆಯಾಗಿ, ರೈತರಿಗೆ ಲಾಭವೂ ಕಡಿಮೆಯಾಗುತ್ತಿತ್ತು. ಪ್ರತೀ ವರ್ಷವೂ ತರಕಾರಿ ಬೆಳೆಯುವರಿಗೆ ಒಂದಿಲ್ಲೊಂದು ತೊಂದರೆ. ಬಾರೀ ಪ್ರಮಾಣದಲ್ಲಿ ಮಳೆ ಹೊಡೆತಕ್ಕೆ ಸಿಕ್ಕಿ ಬೆಳೆ ಹಾಳಾಗುತ್ತದೆ. ಬೇಸಿಗೆಯಲ್ಲಿ ನೀರೊತ್ತಾಯವಾಗುತ್ತದೆ. ಕಳೆ ಬರುತ್ತದೆ. ಹುಳ ಬರುತ್ತದೆ. ಇದಕ್ಕೆಲ್ಲಾ ಮಲ್ಚಿಂಗ್ ಶೀಟು ಹಾಕಿ ಬೆಳೆದರೆ ಅಷ್ಟೊಂದು ಹಾನಿಇಲ್ಲ. ಕಾರಣ ಇಷ್ಟೇ. ಅಧಿಕ ತೇವಾಂಶವಾಗುವುದನ್ನು…