ಅಡಿಕೆ ಗರಿ ಒಣಗುತ್ತಿದೆಯೇ – ಇದು ಉತ್ತಮ ಸುರಕ್ಷಿತ ಪರಿಹಾರ.
ಬಿಸಿಲಿನ ಝಳ ಹೆಚ್ಚಾದಾಗ, ಶುಷ್ಕ ವಾತಾವರಣ ಸ್ಥಿತಿ ಇರುವಾಗ ಅಡಿಕೆ, ತೆಂಗಿನ ಗರಿಗಳು ಹಳದಿಯಾಗಿ ಭಾಗಶಃ ಒಣಗುವುದಕ್ಕೆ ಸರಳ ಪರಿಹಾರ ಇಲ್ಲಿದೆ. ಯಾವಾಗಲೂ ಸಸ್ಯಗಳ ಎಲೆಗಳು ಹಸುರಾಗಿರಬೇಕು. ಆಗ ಅದರ ಉಸಿರಾಟ ನಡೆಸುವ ಅಂಗಗಳು (Stomata) ಚೆನ್ನಾಗಿ ಕೆಲಸ ಮಾಡುತ್ತದೆ. ಎಲೆಗಳ ಹಸುರು ಭಾಗ (ಪತ್ರ ಹರಿತ್ತು)ದಲ್ಲಿ ಈ ಸ್ಟೊಮಟಾ ಇರುತ್ತದೆ. ಹರಿತ್ತು ಕಡಿಮೆ ಅದಂತೆ ಸಸ್ಯ ಬೆಳವಣಿಗೆ ಕುಂಠಿತವಾಗುತ್ತದೆ. ಬಹುತೇಕ ಎಲೆಗಳು ಹಳದಿಯಾಗಿ ಒಣಗಿದರೆ ಮರ ಸಾಯಲೂ ಬಹುದು. ಇದಕ್ಕೆ ಕಾರಣ ಒಂದು ಬಿಸಿಲು. ಬಿಸಿಲಿನ…